ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ

0

ಪುತ್ತೂರು: ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವಕ್ಕೆ ಎ.2ರಂದು ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು.


ಬೆಳಿಗ್ಗೆ ಶಾಂತಿಗೋಡು ಶ್ರೀವಿಷ್ಣುಮೂರ್ತಿ ಭಜನಾ ಮಂದಿರದಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಶಾಂತಿಗೋಡು ರವರು ಚಾಲನೆ ನೀಡಿದರು.

ಬಳಿಕ ಮೆರಣಿಗೆ ಮೂಲಕ ಹೊರೆಕಾಣಿಕೆ ದೇವಾಲಯಕ್ಕೆ ಸಮರ್ಪಿಸಲಾಯಿತು. ದೇವಾಲಯದಲ್ಲಿ ಅರ್ಚಕ ರಾಮಕೃಷ್ಣ ಬಳ್ಳಕ್ಕುರಾಯರವರು ಹೊರೆಕಾಣಿಕೆಗೆ ಪೂಜೆ ಸಲ್ಲಿಸಿದರು. ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೊನ್ನಪ್ಪ ಗೌಡ ಕೈಂದಾಡಿ, ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕೈಂದಾಡಿ, ಕೋಶಾಧಿಕಾರಿ ಬಾಲಕೃಷ್ಣ ಗೌಡ ತೋಟ ಹಾಗೂ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here