ಪುತ್ತೂರು: ಹನುಮಗಿರಿ ಶ್ರೀ ಕ್ಷೇತ್ರದಲ್ಲಿ ಹನುಮಗಿರಿ ಜಾತ್ರೆಯು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ಎ.4 ರಿಂದ ಆರಂಭಗೊಂಡು ಎ.6 ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಎ.4 ರಂದು ಮಧ್ಯಾಹ್ನ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಉಗ್ರಾಣ ತುಂಬಿಸುವುದು,ರಾತ್ರಿ ಸಹಸ್ರ ದೀಪಾಲಂಕಾರ ಸಹಿತ ರಂಗಪೂಜೆ, ಪವಮಾನ ರಥೋತ್ಸವ, ಪ್ರಸಾದ ವಿತರಣೆ ಬಳಿಕ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ.
ಎ.5 ರಂದು ಬೆಳಿಗ್ಗೆ ನಾಗತಂಬಿಲ, ಗಣಪತಿ ಹೋಮ, ಮಧ್ಯಾಹ್ನ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ತಾಯಂಬಕ ಸೇವೆ, ಮಹಾಪೂಜೆ, ಶ್ರೀ ದೇವರ ಬಲಿ ಹೊರಡುವುದು, ಉತ್ಸವ ಬಲಿ, ಬೆಡಿ ಸೇವೆ, ಕಟ್ಟೆ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.
ಎ.6 ರಂದು ಹನುಮ ಜಯಂತಿ ಸಂಭ್ರಮ, ಬೆಳಿಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ಬಳಿಕ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಎ.6 ರಂದು ಸಂಜೆ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳ ಇವರಿಂದ `ಚೂಡಾಮಣಿ -ಇಂದ್ರಜಿತು-ಮಹಿರಾವಣ’ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೋತ್ಸವದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗುವ ಮೂಲಕ ಗಂಧಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸುವಂತೆ ಧರ್ಮಶ್ರಿ ಪ್ರತಿಷ್ಠಾನದ ಮಹಾಪೋಷಕ ಜಿ.ಕೆ ಮಹಾಬಲೇಶ್ವರ ಭಟ್, ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ ಹಾಗೂ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.