ಏ.5ರಿಂದ 8ರವರೆಗೆ ನೂಜಿ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೆ-ನೇಮೋತ್ಸವ

0

ಕಡಬ: ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೆ, ನೇಮೋತ್ಸವ ಏ.5ರಿಂದ ಪ್ರಾರಂಭಗೊಂಡು ಏ.8ರವರೆಗೆ ನಡೆಯಲಿದೆ.

ಏ.5ರಂದು ಬೆಳಿಗ್ಗೆ ಧ್ವಜಾರೋಹಣ, ಉಗ್ರಾಣ ಮುಹೂರ್ತ ಬಳಿಕ ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ್ ತಂತ್ರಿಯವರಿಗೆ ಮತ್ತು ಕ್ಷೇತ್ರದ ದೈವಜ್ಞರಾದ ಬಾಲಕೃಷ್ಣ ನಾಯರ್ ಹಾಗೂ ಕ್ಷೇತ್ರದ ಶಿಲ್ಪಿಗಳಾದ ರಮೇಶ್ ಕಾರಂತ ಬೆದ್ರಡ್ಕರವರಿಗೆ ಗೌರವಾರ್ಪಣೆ ನಡೆಯಲಿದೆ. ಮಧ್ಯಾಹ್ನ ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ರಂಗಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಲಿದೆ.


ಏ.6ರಂದು ನೂಜಿಗುತ್ತು ಮನೆಯಿಂದ ದೈವಗಳ ಆಭರಣವನ್ನು ಹಾಗೂ ಇಚಿಲಂಪಾಡಿ ಬೀಡಿನ ಶುಭಕರ ಹೆಗ್ಗಡೆಯವರನ್ನು ಮೆರವಣಿಗೆಯಲ್ಲಿ ಸಂಪ್ರದಾಯದಂತೆ ಕರೆತರುವುದು. ರಾತ್ರಿ ಸುಬ್ರಹ್ಮಣ್ಯ ಮಾಗನೆ ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ಅವರನ್ನು ಸ್ವಾಗತಿಸುವುದು. ರಾತ್ರಿ ಸಾಮೂಹಿಕ ರಂಗಪೂಜೆ ಮತ್ತು ಪ್ರಸಾದ ವಿತರಣೆ, ಬಳಿಕ ಹಲ್ಲತ್ತಾಯ ಮತ್ತು ಪಂಜುರ್ಲಿ ದೈವಗಳ ಭಂಡಾರ ತೆಗೆದು ನೇಮ ನಡೆದು ಅನ್ನಸಂತರ್ಪಣೆ ನಡೆಯಲಿದೆ.


ಏ.7ರಂದು ಬೆಳಿಗ್ಗೆ ಶ್ರೀ ಉಳ್ಳಾಲ್ತಿ ಅಮ್ಮನವರ ಭಂಡಾರ ತೆಗೆದು ನೇಮೋತ್ಸವ, ಮಧ್ಯಾಹ್ನ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ, ಅಪರಾಹ್ನ ಧ್ವಜಾರೋಹಣ ನಡೆಯಲಿದೆ. ರಾತ್ರಿ ಗುಳಿಗ ದೈವದ ಭಂಡಾರ ತೆಗೆದು ನೇಮೋತ್ಸವ ನಡೆಯಲಿದೆ.

ಏ.8ರಂದು ಬೆಳಿಗ್ಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಹಾಗೂ ಪರಿವಾರ ದೈವಗಳ ಶುದ್ಧಿ ಕಲಶ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ. ರಾತ್ರಿ ನೂಜಿ ಗುತ್ತು ಅಂಕದ ಮಜಲು ಶಿರಾಡಿ ದೈವ ಹಾಗೂ ಪರಿವಾರ ದೈವಗಳ ಭಂಡಾರ ತೆಗೆದು ನೇಮೋತ್ಸವ ನಡೆಯಲಿದೆ ಎಂದು ವಿವಿಧ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here