ಪುತ್ತೂರು:ಆರ್ಯಾಪು ಗ್ರಾಮದ ದೊಡ್ಡಡ್ಕ ಶ್ರೀ ಮಹಾಲಕ್ಷ್ಮೀ ಭಜನಾ ಮಂದಿರದ ೩೦ನೇ ವರ್ಷದ ವಾರ್ಷಿಕೋತ್ಸವವು ಎ.೭ರಂದು ನಡೆಯಲಿದೆ. ಬೆಳಿಗ್ಗೆ ಗಣಪತಿಹೋಮ, ನಂತರ ಮಿತ್ತೂರು ಶ್ರೀ ತಿರುಮಲೇಶ್ವರ ಭಟ್‌ರವರ ನೇತೃತ್ವದಲ್ಲಿ ಸಾರ್ವಜನಿಕ ಮಹಾಲಕ್ಷ್ಮೀ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಅಪರಾಹ್ನ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಸಂಜೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಎಸ್‌ಡಿಪಿ ರೆಮಿಡೀಸ್&ರಿಸರ್ಚ್ ಸೆಂಟರ್‌ನ ಆಡಳಿತ ನಿರ್ದೇಶಕ ಡಾ.ಹರಿಕೃಷ್ಣ ಪಾಣಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ನರಿಮೊಗರು ಪ್ರಸಾಧಿನಿ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ವಲಯದ ಅಧ್ಯಕ್ಷ ಸತೀಶ್ ಗೌಡ ಒಳಗುಡ್ಡೆ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಅನ್ನಸಂತರ್ಪಣೆ ನಡೆದು ನಂತರ ಹನುಮಗಿರಿ ಶ್ರೀಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ `ಶುಕ್ರ ನಂದನ’ ಎಂಬ ಯಕ್ಷಗಾನ ಬಯಲಾಡ ನಡೆಯಲಿದೆ.