ಶಾಸಕ ಸಂಜೀವ ಮಠಂದೂರು ಅವರ ಮಾನಹಾನಿ ಪ್ರಕರಣ- ಕ್ರಮಕೈಗೊಳ್ಳಲು ಶಾಸಕರ ಆಪ್ತ ಸಹಾಯಕರಿಂದ ಸೈಬರ್ ಕ್ರೈಮ್ ವಿಭಾಗಕ್ಕೆ ದೂರು

0

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರನ್ನು ಹೋಲುವ ಫೋಟೋಗಳನ್ನು ಮಹಿಳೆಯ ಫೋಟೊದೊಂದಿಗೆ ಜೋಡಣೆ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಬಗ್ಗೆ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರ ಆಪ್ತ ಸಹಾಯಕ ವಸಂತ್ ಎಸ್. ಸೈಬರ್ ಕೈಮ್ ವಿಭಾಗಕ್ಕೆ ದೂರು ನೀಡಿದ್ದಾರೆ.

ಬೆಂಗಳೂರು ಹಲಸೂರು ಗೇಟ್ ಪೊಲೀಸ್ ಠಾಣೆಯ ಸೈಬರ್ ಕ್ರೈಮ್ ವಿಭಾಗಕ್ಕೆ ನೀಡಿರುವ ದೂರಿನಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರ ಫೊಟೋವನ್ನು ಮಹಿಳೆಯೊಬ್ಬರ ಫೊಟೋದೊಂದಿಗೆ ಎಡಿಟ್ ಮಾಡಿ, ಫೇಸ್ ಬುಕ್, ವಾಟ್ಸ್ ಆಪ್ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಶಾಸಕರ ಮಾನಹಾನಿ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೈಬರ್ ವಿಭಾಗದ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here