ಕಾಣಿಯೂರು : ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಸಂಸ್ಥೆಯು ಪರಿಶೀಲನೆಗಾಗಿ ಎ.4 ಮತ್ತು ಎ.5ರಂದು ಭೇಟಿ ನೀಡಿದ್ದಾರೆ.
ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಸಂಸ್ಥೆಯ (ನ್ಯಾಕ್) ಪರಿಶೀಲನಾ ತಂಡದ ಮುಖ್ಯಸ್ಥರಾದ ವಾರಣಾಸಿ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರೊ.ಹೆಚ್.ಕೆ.ಸಿಂಗ್, ಸಂಯೋಜಕ ಸದಸ್ಯರಾದ ಕೇರಳ ಪೆರಿಯ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ.ಸುರೇಶ್ ರಂಗರಾಜನ್ ಮತ್ತು ಸದಸ್ಯರಾದ ಮಧ್ಯಪ್ರದೇಶ ಸಿಕಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ|ತರಣ್ಜೀತ್ ಸೂದ್ ಅವರು ಭಾಗವಹಿಸಿ ಕಾಲೇಜಿನ ವಿವಿಧ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಭೌತಿಕ ವ್ಯವಸ್ಥೆಗಳನ್ನು ತಪಾಸಣೆ ನಡೆಸಿದರು. ಅಪರಾಹ್ನ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು,ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ|ಶಂಕರ ಭಟ್, ಐಕ್ಯೂಎಸಿ ಸಂಚಾಲಕ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಆದ ಪ್ರೊ|ಪದ್ಮನಾಭ.ಕೆ ಮತ್ತು ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.