ಸ್ವಚ್ಛತೆ ಇರುವಲ್ಲಿ ದೇವರಿರುತ್ತಾರೆ – ಕೇಶವಪ್ರಸಾದ್ ಮುಳಿಯ
ಪುತ್ತೂರು: ಸ್ವಚ್ಛತೆ ಇರುವಲ್ಲಿ ದೇವರಿರುತ್ತಾರೆ. ಸ್ವಚ್ಛ ಪರಿಸರವು ಎಲ್ಲಾ ಕಾರ್ಯಗಳಿಗೂ ಮುದ ಕೊಡುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲ ಪ್ರತಿನಿತ್ಯ ಒಂದಷ್ಟು ಸಮಯ ದೇವಳದ ಪರಿಸರ ಸಚ್ಛತೆಗೆ ಮೀಸಲಿಡುವಂತಾಗಬೇಕೆಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಹೇಳಿದರು.
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಲುವಾಗಿ ಎ.9ರಂದು ಬೆಳಿಗ್ಗೆ ವಿವಿಧ ಸಂಘ ಸಂಸ್ಥೆಗಳು, ಭಜನಾ ಮಂಡಳಿ, ಯೋಗ ಸಂಸ್ಥೆಗಳು, ಭಕ್ತರು ಸೇರಿಕೊಂಡು ದೇವಳದ ಪರಿಸರ ಸ್ವಚ್ಚತೆ ಕಾರ್ಯಕ್ರಮದ ವೇಳೆ ಅವರು ಮಾತನಾಡಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಕಾಮತ್, ರಾಮದಾಸ್ ಗೌಡ, ಶೇಖರ್ ನಾರಾವಿ, ಬಿ ಐತ್ತಪ್ಪ ನಾಯ್ಕ್, ಡಾ.ಸುಧಾ ಎಸ್ ರಾವ್, ವೀಣಾ ಬಿ.ಕೆ, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಸಹಿತ ವಿವಿ ಸಂಘಟನೆಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.