ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ಇದರ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಇವರ ಸಹಕಾರದೊಂದಿಗೆ ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಆಸ್ಪತ್ರೆ, ದೇರಳಕಟ್ಟೆ ಮಂಗಳೂರು ಇದರ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವು ಎ.9ರಂದು ಶ್ರೀರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು ತಾಲೂಕು ಸರಕಾರಿ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ.ಪ್ರತ್ಯುಷಾ ಅವರು ಶಿಬಿರ ಉದ್ಘಾಟಿಸಿ ಮಕ್ಕಳ ಆರೋಗ್ಯ ರಕ್ಷಣೆಯ ಮಹತ್ವವನ್ನು ವಿವರಿಸಿದರು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರು ವಹಿಸಿದರು. ಮುಖ್ಯ ಅತಿಥಿಯಾಗಿದ್ದ ಕೆ.ಎಸ್. ಹೆಗ್ಡೆ ಕಮ್ಯೂನಿಟಿ ಮೆಡಿಸಿನ್ ವೈದ್ಯ ಡಾ. ಅವಿನ್ ಆಳ್ವ, ಆಲಂಕಾರು ಆದಿತ್ಯ ಕ್ಲಿನಿಕ್ನ ಡಾ.ಆಕಾಶ್ ಅವರು ಸಂದರ್ಭೋಚಿತವಾಗಿ ಮಾತನಾಡಿದರು.
ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕರಾದ ರಮೇಶ್ ರೈ, ತಾಂತ್ರಿಕ ಸಲಹೆಗಾರ ಜಯೇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ., ವಂದಿಸಿದರು. ಸಹಶಿಕ್ಷಕ ಕಿಶೋರ್ ಕುಮಾರ್ ಬಿ ಕಾರ್ಯಕ್ರಮ ನಿರ್ವಹಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಸಾಮಾನ್ಯ ವೈದ್ಯಕೀಯ ವಿಭಾಗ, ಸ್ತ್ರೀರೋಗ ಪ್ರಸೂತಿ ವಿಭಾಗ, ಮಕ್ಕಳ ವಿಭಾಗದಲ್ಲಿ ತಜ್ಞ ವೈದ್ಯರಿಂದ ಮಕ್ಕಳ, ನಾಗರಿಕರ ಆರೋಗ್ಯ ತಪಾಸಣೆ ನಡೆಯಿತು. ಸುಮಾರು 350 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.