ರಾಮಕುಂಜ ಆ.ಮಾ.ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ|ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮದಿನವನ್ನು ಎ.14ರಂದು ಆಚರಿಸಲಾಯಿತು.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಯವರು ದೀಪ ಬೆಳಗಿಸಿ, ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು, ಅವರ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ತಾಂತ್ರಿಕ ಸಲಹೆಗಾರ ಜಯೇಂದ್ರ ಬಿ.ಅವರು ಅಂಬೇಡ್ಕರ್ ಅವರ ಜೀವನ ಚರಿತ್ರೆ ಮತ್ತು ಸಾಧನೆಗಳ ಬಗ್ಗೆ ಗುಣಗಾನ ಮಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್ ವಂದಿಸಿದರು. ಸಹಶಿಕ್ಷಕ ಸಂಜನ್ ಕೆ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಲಾಯಿತು.

LEAVE A REPLY

Please enter your comment!
Please enter your name here