ಪುತ್ತೂರು: ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಸಿಗದೇ ಇರುವುದರಿಂದ ಬೇಸರಗೊಂಡಿದ ಅರುಣ್ ಕುಮಾರ್ ಪುತ್ತಿಲ ಅವರು ಅಭಿಮಾನಿಗಳ ಕೋರಿಕೆಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.
ಏಪ್ರಿಲ್ 15 ರಂದು ಪತ್ರಿಕಾಗೋಷ್ಠಿ ಕರೆದು ತಮ್ಮ ನಿಲುವನ್ನು ಪ್ರಕಟಿಸಿರುವ ಅರುಣ್ ಕುಮಾರ್ ಪುತ್ತಿಲ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.ಎ 17ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಹಿಂದುತ್ವದ ಆಧಾರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಕಣಕ್ಕಿಲಿದ್ದೇನೆ,
ಗೆದ್ದ ಬಳಿಕ ಮತ್ತೆ ಬಿಜೆಪಿಗೆ ಸಹಕಾರ ಕೊಡುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ. ಮೊನ್ನೆ ಚುನಾವಣೆಗೆ ಪೂರ್ವ ಸಿದ್ದತೆಯಾಗಿ ನಡೆದ ಸಭೆಯಲ್ಲಿ ನಾನು ಹೇಳಿದ್ದಂತೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ. ಹಿಂದುತ್ವದ ಆಧಾರದಲ್ಲಿ ಕ್ಷೇತ್ರ ಜಯಿಸಲಿದ್ದೇನೆ. ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ ಸೇವೆಯ ಬಳಿಕ ಗಂಧ ಪ್ರಸಾದ ಸ್ವೀಕರಿಸಿ ಬೆಂಬಲಿಗರೊಂದಿಗೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.