ಕಾಣಿಯೂರು: ಸುಳ್ಯ ವಿಧಾನ ಸಭಾ ಕ್ಷೇತ್ರದ ಆಮ್ ಆದ್ಮಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಅವರು ಏ 18ರಂದು ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ ಸುಳ್ಯ ತಾಲೂಕು ಕಛೇರಿಯಲ್ಲಿ ಸುಳ್ಯ ಚುನಾವಣಾಧಿಕಾರಿ ಅರುಣ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಮಂಜುನಾಥ ಜಿ, ರಮೆಶ್ಬಾಬು ಜತೆಗಿದ್ದರು. ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ, ಪ್ರಮುಖರಾದ ಗುರುಪ್ರಸಾದ್ ಮೆರ್ಕಜೆ, ಕಲಂದರ್ ಎಲಿಮಲೆ, ರಶೀದ್ ಜಟ್ಟಿಪಳ್ಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.