ಸುಳ್ಯ ಜೆಡಿಎಸ್ ಅಭ್ಯರ್ಥಿ ಹೆಚ್‌.ಎಲ್.ವೆಂಕಟೇಶ್ ನಾಮಪತ್ರ ಸಲ್ಲಿಕೆ

0

ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್.ವೆಂಕಟೇಶ್ ಏ.19ರಂದು ನಾಮಪತ್ರ ಸಲ್ಲಿಸಿದ್ದಾರೆ. ನಗರದಲ್ಲಿ ಮೆರವಣಿಗೆಯಲ್ಲಿ ಸಾಗಿ ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಅರುಣ್‌ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ.ಸದಾಶಿವ, ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಕಡಬ ತಾಲೂಕು ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಅಗ್ರಹಾರ ದುಗ್ಗಪ್ಪ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಇಕ್ಬಾಲ್ ಎಲಿಮಲೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here