ಪುತ್ತೂರು:ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ನಾಮಪತ್ರ ಸಲ್ಲಿಕೆಗೆ ಏ.20 ಕಡೆ ದಿನವಾಗಿದೆ. ಪುತ್ತೂರು,ಸುಳ್ಯ, ಬಂಟ್ವಾಳ ಸೇರಿದಂತೆ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಒಂದೇ ದಿನ ಚುನಾವಣೆ ನಡೆಯಲಿದ್ದು ಈಗಾಗಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಸ್ಡಿಪಿಐ ಸಹಿತ ವಿವಿಧ ಪಕ್ಷಗಳ ಮತ್ತು ಹಲವು ಮಂದಿ ಪಕ್ಷೇತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್,ಆಮ್ ಆದ್ಮಿ, ಎಸ್ಡಿಪಿಐ, ಏ.20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.ಏ.21ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ.24ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ. ಮೇ 10ಕ್ಕೆ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.