





ಪುತ್ತೂರು: ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಪ್ರಗತಿ ಪರ ಕೃಷಿಕ, ಮುಂಡೂರು ಕುಕ್ಕಿನಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು ಆಗಿರುವ ಪಜಿಮಣ್ಣು ಅಡೀಲು ನಿವಾಸಿ ಮೋನಪ್ಪ ಕರ್ಕೇರಾ(68. ವ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.







