ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಸತತ 6ನೇ ಬಾರಿಗೆ ಶೇ. 100 ಫಲಿತಾಂಶ

0

ಪುತ್ತೂರು : 2022-23ನೇ ಶೈಕ್ಷಣಿಕ ವರ್ಷದಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಶೇ.100ರ ಅತ್ಯುತ್ತಮ ಫಲಿತಾಂ ವನ್ನು ತಮ್ಮದಾಗಿಸಿಕೊಂಡಿರುತ್ತಾರೆ.


ಪರೀಕ್ಷೆ ಬರೆದ ೪೬ ವಿದ್ಯಾರ್ಥಿಗಳಲ್ಲಿ , ೨೫ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ , ೨೦ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ಆಶಿಕಾ ಎಮ್ ೫೮೪ ಅಂಕ-ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಮನೋಹರ್ ಮತು ಸವಿತಾ ಎಮ್ ದಂಪತಿಗಳ ಪುತ್ರಿ ಹಾಗೂ ಮನಸ್ವಿನಿ 573 ಅಂಕ- ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಇವರು ಎನ್ ರಾಮಚಂದ್ರ ಭಟ್ ಮತ್ತು ಅನಿತಾ ಆರ್ ಭಟ್ ದಂಪತಿಗಳ ಪುತ್ರಿ .
ಪ್ರಸಕ್ತ ಸಾಲಿನ ಫಲಿತಾಂಶವು ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಗುಣಮಟ್ಟದ ಕೈಗನ್ನಡಿಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here