![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಚುನಾವಣಾ ಪ್ರಚಾರ ಸಭೆ ಇಂದು ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಚಾಲನೆ ನೀಡಿದ ಈ ಕಾರ್ಯಕ್ರಮದಲ್ಲಿ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾಗವಹಿಸಿದ್ದರು.
![](https://puttur.suddinews.com/wp-content/uploads/2023/04/5da3b8a2-8d33-4dac-a8a8-3681697273e4-1.jpg)
ಕಾರ್ಯಕ್ರಮದ ಬಳಿಕ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಅಶೋಕ್ ರೈ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಸಂತ ಬಂಗೇರ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಏ ಐ ಸಿ ಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್, ಮಮತಗಟ್ಟಿ, ಎಐಸಿಸಿ ವೀಕ್ಷಕರದ ಶಾಸಕ ಸಜೀವ ಜೋಸೆಫ್, ಮಾಜಿ ಸಚಿವ ಅಭಯ ಚಂದ್ರ ಜೈನ್ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.