




ಪುತ್ತೂರು:ಇಲ್ಲಿನ ರೈಲು ನಿಲ್ದಾಣದ ಬಳಿಯಿರುವ ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವಗಳು ನಡೆದು ಕ್ಷೇತ್ರದ ಕಲ್ಲರ್ಟಿ ಹಾಗೂ ಗುಳಿಗ ದೈವಗಳ ನೇಮೋತ್ಸವ ಎ.23ರಂದು ರಾತ್ರಿ ನಡೆಯಿತು.




ಸಂಜೆ ದೈವಗಳ ಭಂಡಾರ ತೆಗೆದು, ಅನ್ನಸಂತರ್ಪಣೆ ನಡೆದ ಬಳಿಕ ಕ್ಷೇತ್ರದ ದೈವಗಳಾದ ಕಲ್ಲುರ್ಟಿ ಹಾಗೂ ಗುಳಿಗ ದೈವಗಳಿಗೆ ನೇಮೋತ್ಸವ ನೆರವೇರಿತು. ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯ ಹಾಗೂ ನೂರಾರು ಮಂದಿ ಭಕ್ತಾದಿಗಳು ನೇಮೋತ್ಸವದಲ್ಲಿ ಭಾಗವಹಿಸಿದ್ದರು.














