ಫೇಸ್ ಬುಕ್‌ನಲ್ಲಿ ಪರಿಚಯವಾದ ಅಪ್ರಾಪ್ತೆಯ ಅತ್ಯಾಚಾರ ಆರೋಪ; ಕೆಯ್ಯೂರು ನಿವಾಸಿ ನವೀನ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

0

ಪುತ್ತೂರು:ಫೇಸ್ ಬುಕ್‌ನಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿ ಆಕೆಯನ್ನು ಪುಸಲಾಯಿಸಿ ಕೆಯ್ಯೂರು ಗ್ರಾಮದ ಮಾಡಾವು ಸಮೀಪ ಅಂಗನವಾಡಿ ಶಾಲೆಯ ವರಾಂಡಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆ ಏ.16 ತಡ ರಾತ್ರಿ ನಡೆದಿರುವ ಕುರಿತು ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ನವೀನ್ ಆರೋಪಿ ಎಂದು ಹೆಸರಿಸಲಾಗಿದೆ.ಅವರು ಫೇಸ್ ಬುಕ್‌ನಲ್ಲಿ ಪರಿಚಯವಾದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಏ.16ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಗದ್ದೆಯಲ್ಲಿ ಭೇಟಿಯಾಗಿ ಆಕೆಯನ್ನು ಪುಸಲಾಯಿಸಿ ರಾತ್ರಿ ಸ್ಕೂಟರ್ನಲ್ಲಿ ಕೆಯ್ಯೂರಿನ ಮಾಡಾವು ಅಂಗನವಾಡಿ ಬಳಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಆರೋಪಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here