ಕೆಮ್ಮಾಯಿ ಕೃಷ್ಣನಗರದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

0

ಪುತ್ತೂರು: ಪುತ್ತೂರು ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಎಲ್ಲಾ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸಲಿದ್ದು, ಯಾವುದೇ ಗುಂಪುಗಾರಿಕೆ ನಮ್ಮಲ್ಲಿಲ್ಲ.

ಬದಲಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ. ಎಂದು ಕಾವು ಹೇಮನಾಥ ಶೆಟ್ಟಿ ಹೇಳಿದ್ದಾರೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರ ಕೆಮ್ಮಾಯಿ ಕೃಷ್ಣ ನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ ಬಿ, ಪ್ರಶಾಂತ್ ಶೆಟ್ಟಿ, ಇಸಾಕ್ ಸಾಲ್ಮರ, ಅನ್ವರ್ ಖಾಸಿಂ, ಲ್ಯಾನ್ಸಿ ಮಸ್ಕರೇಂಜಸ್, ಕೃಷ್ಣಪ್ರಸಾದ್ ಆಳ್ವ ಸೇರಿದಂತೆ ಪಕ್ಷದ ಹಲವಾರು ಮುಖಂಡರು, ನೂರಾರು ಕಾರ್ಯಕರ್ತರು, ಹಿತೈಷಿ ಅಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here