ಪುತ್ತೂರು: ಪುತ್ತೂರು ವಿದಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಹಿಂದುತ್ವದ ಹೆಸರಿನಲ್ಲಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬೆಂಬಲ ಸೂಚಿಸಿ ಮಹಿಳಾ ಕಾರ್ಯಕರ್ತರ ಸಮಾವೇಶ ‘ಸೀತಾ ಪರಿವಾರ’ ಎ.28ರಂದು ಮುಕ್ರಂಪಾಡಿ ಸುಭದ್ರಾ ಸಭಾಭವನದಲ್ಲಿ ನಡೆಯಲಿದೆ ಎಂದು ಸೀತಾ ಪರಿವಾರ ಸಮಾವೇಶದ ಪ್ರಮುಖರಾಗಿರುವ ವಸಂತ ಲಕ್ಷ್ಮೀ ಅವರು ತಿಳಿಸಿದರು.
ಹಿಂದುತ್ವದ ಅಡಿಯಲ್ಲಿ ಸುಮಾರು 30 ವರ್ಷಗಳಿಂದ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರನ್ನು ಕಾರ್ಯಕರ್ತರ ಅಪೇಕ್ಷೆಯಂತೆ ಈ ಭಾರಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಅವರ ಗೆಲುವು ರಾಜ್ಯದಲ್ಲಿ ಬಿಜೆಪಿಯ ಗೆಲವುವಾಗಲಿದೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ಗೆಲುವು ಆಗಲಿದೆ. ಹಾಗಾಗಿ ಮಹಿಳಾ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಬೆಂಬಲ ಸೂಚಿಸಲಿದ್ದಾರೆ. ನಾವೆಲ್ಲ ಒಗ್ಗಟ್ಟಿನಿಂದ ಕ್ಷೇತ್ರಾದಾದ್ಯಂತ ಪ್ರಚಾರ ಕಾರ್ಯ ನಡೆಸುತ್ತಿದ್ದು, ಮಹಿಳಾ ಕಾರ್ಯಕರ್ತರು ಸೀತಾಪರಿವಾರ ಎಂಬ ಹೆಸರಿನಡಿಯಲ್ಲಿ ಸಮಾವೇಶ ನಡೆಸಲಿದ್ದಾರೆ. ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗಾರದ ಅಶ್ವಿನಿ ಗೌಡ, ಡಾ. ಚೇತಾನ, ಪುಷ್ಪ ಗೌಡ, ಗೀತಾ ಆಚಾರ್ಯ, ಶಶಿಕಲಾ ರೈ, ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಉಪಸ್ಥಿತರಿದ್ದರು.