ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿಯ ಚುನಾವಣಾ ಕಾರ್ಯಾಲಯ ಉದ್ಘಾಟನೆ

0

ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮ ಎ.27 ರಂದು ಬೈಪಾಸ್ ಅಶ್ಮಿ ಟವರ್ ನಲ್ಲಿ ನಡೆಯಿತು.


ಅರ್ಚಕ ಸಂದೀಪ್ ಕಾರಂತ್ ಅವರ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಬಿಂದು ಸುರೇಶ್ ಮತ್ತು ಬಿಜೆಪಿ‌‌ ಮಂಡಲದ ಮಾಜಿ ಅಧ್ಯಕ್ಷ ಹಿರಿಯರಾದ ಮುಗೆರೋಡಿ ಬಾಲಕೃಷ್ಣ ರೈ ಅವರು ಕಾರ್ಯಾಲಯ ಉದ್ಘಾಟಿಸಿದರು.

ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ್, ಹಿಂದುಳಿದ ಮೋರ್ಚಾದ ಜಿಲ್ಲಾ ಅಧ್ಯಕ್ಷ ಆರ್ ಸಿ ನಾರಾಯಣ್, ನಗರಸಬವೆ ಅಧ್ಯಕ್ಷ ಕೆ ಜೀವಂಧರ್ ಜೈನ್, ರಾಷ್ಡ್ರೀಯ ಸ್ವಯಂ ಸೇವಕ ಸಂಘದ ಅಚ್ಚುತ ನಾಯಕ್, ಶಿವಪ್ರಸಾದ್ ಇ, ಬಿಜೆಪಿ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ದಿಶಾ ನಾಮ ನಿರ್ದೇಶಿತ ಸದಸ್ಯ ರಾಮದಾಸ್ ಹಾರಾಡಿ, ಶಶಿಕುಮಾರ್ ರೈ ಬಾಲ್ಯೊಟ್ಟು, ಎನ್ ಎಸ್ ಮಂಜುನಾಥ್, ರಾಜೇಶ್ ಬನ್ನೂರು, ಗೌರಿ ಬನ್ನೂರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಚಂದ್ರಶೇಖರ್ ರಾವ್ ಬಪ್ಪಳಿಗೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here