ಉಪ್ಪಿನಂಗಡಿ: ಮತದಾನದ ಕುರಿತಾಗಿ ಜಾಗೃತಿ ಜಾಥಾ ಹಾಗೂ ಬೀದಿ ನಾಟಕ ಉಪ್ಪಿನಂಗಡಿಯಲ್ಲಿ ಎ.26ರಂದು ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಪುತ್ತೂರು ತಾಲೂಕು ಸ್ವೀಪ್ ಸಮಿತಿ, ಉಪ್ಪಿನಂಗಡಿ ಗ್ರಾಮ ಪಂಚಾಯತ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ, ರೋಟರಿ ಪುತ್ತೂರು ಎಲೈಟ್, ರೋಟರಿ ಉಪ್ಪಿನಂಗಡಿ ಹಾಗೂ ರೋಟರ್ಯಾಕ್ಟ್ ಕ್ಲಬ್, ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಂಸಾರ ಜೋಡುಮಾರ್ಗ ಇವರ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪುತ್ತೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧೆಡೆ ಮತದಾನದ ಮಹತ್ವವನ್ನು ಸಾರುವ ಸಲುವಾಗಿ ಬೀದಿನಾಟಕ, ಜಾಥಾ ಮೂಲಕ ಮತದಾರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಮತದಾನ ಮಾಡುವ ಮೂಲಕ ಸಂವಿಧಾನ ನೀಡಿದ ಹಕ್ಕನ್ನು ಎಲ್ಲರೂ ಚಲಾಯಿಸಬೇಕು. ಯಾವುದೇ ಆಮಿಷಗಳಿಗೆ ಬಲಿಯಾಗದೆ ಎಲ್ಲರೂ ಮೇ.10 ರಂದು ಮತದಾನ ಮಾಡಬೇಕು ಎಂದು ಹೇಳಿದರು.
ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಉಪ್ಪಿನಂಗಡಿ ಬಸ್ ನಿಲ್ದಾಣದವರೆಗೆ ಮತದಾನ ಜಾಗೃತಿ ಜಾಥಾ ನಡೆಯಿತು. ಬಳಿಕ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿಗಳು, ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಂಡರು.
ಸೆಕ್ಟರ್ ಆಫೀಸರ್‌ಗಳಾದ ಆನಂದ ಕುಮಾರ್, ಜಯರಾಮ್, ತಾ.ಪಂ. ಯೋಜನಾಧಿಕಾರಿ ಸುಕನ್ಯಾ ಮಾತನಾಡಿ, ಶುಭ ಹಾರೈಸಿದರು. ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಸಂದೀಪ್, ಉಪ್ಪಿನಂಗಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್, ರೋಟರಿ ಪುತ್ತೂರು ಎಲೈಟ್ ಕ್ಲಬ್ ಸರ್ವೀಸ್ ಡೈರೆಕ್ಟರ್ ಆಸ್ಕರ್ ಆನಂದ್, ಉಪ್ಪಿನಂಗಡಿ ಸರಕಾರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ, ಸಹಾಯಕ ಪ್ರಾಧ್ಯಾಪಕ ಈಶ್ವರಪ್ಪ, ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.
ರಂಗ ನಿರ್ದೇಶಕ ಮೌನೇಶ್ ವಿಶ್ವಕರ್ಮ ನಿರೂಪಣೆಯಲ್ಲಿ ಮೂಡಿಬಂದ ಈ ಬೀದಿ ನಾಟಕದಲ್ಲಿ ಕಲಾವಿದರಾಗಿ ಬಾಲು ನಾಯ್ಕ್, ಈಶ್ವರ್ ಬೆಡೇಕರ್, ಚಂದ್ರಮೌಳಿ, ಜಾನ್ಸನ್, ಸ್ವೀಡಲ್, ಹಾರ್ವಿನ್, ಪೃಥ್ವಿ ರಾಜ್, ಪ್ರಜ್ವಲ್ ಆರ್.ಸಿ., ದಿವ್ಯ ಎಂ., ವೀಣಾ ಕುಮಾರಿ ಎಸ್., ದೀಕ್ಷಿತಾ ಕೆ., ಪಲ್ಲವಿ ಬಿ.ರೈ, ರೇಷ್ಮಾ ವಿ., ಧನ್ಯ ಅಭಿನಯಿಸಿದರು.