ಪುತ್ತೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವಾರ್ ರೂಂ ಸಂಯೋಜಕರಾಗಿ ಸಂತೋಷ್ ಭಂಡಾರಿ ಚಿಲ್ಮೆತ್ತಾರುರವರು ನೇಮಕಗೊಂಡಿದ್ದಾರೆ.
ಕೆಪಿಸಿಸಿ ವಾರ್ ರೂಂನ ಪ್ರಧಾನ ಛೇರ್ ಮ್ಯಾನ್ ಸಸಿಕಾಂತ್ ಸೆಂಥಿಲ್ ರವರು ಸಂತೋಷ್ ಭಂಡಾರಿ ಚಿಲ್ಮೆತ್ತಾರುರವರನ್ನು ವಾರ್ ರೂಂ ಸಂಯೋಜಕರಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.