ರಾಮಕುಂಜ: ಪುತ್ತೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿರುವ ಸುಲೇಗ ಎಂ.ಕೆ.ಅವರು ಎ.30ರಂದು ಸೇವಾ ನಿವೃತ್ತಿಯಾಗಲಿದ್ದಾರೆ. ಸುಲೇಗ ಅವರು ಸುಮಾರು 37 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಸುಲೇಗ ಅವರು 6-10-1986ರಂದು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ಬೆಳ್ತಂಗಡಿ ತಾಲೂಕಿನ ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಆರಂಭಿಸಿದ್ದರು. ಆ ಬಳಿಕ 30-6-1990 ರಿಂದ 10-7-2002ರ ತನಕ ಹತ್ಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, 11-7-2002 ರಿಂದ 7-4-2016ರ ತನಕ ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದಿ 15-4-2016 ರಿಂದ 30-9-2019ರ ತನಕ ಮೂಡಬಿದ್ರೆ ಪಾಲಡ್ಕ ಪ್ರಾಥಮಿಕ ಆರೋಗ್ಯದಲ್ಲಿ ಸೇವೆ ಸಲ್ಲಿಸಿ, 1-10-2019 ರಿಂದ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿದ್ದಾರೆ. ಇವರು ಕಳೆದ 37 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಇತ್ರಾಡಿ ನಿವಾಸಿ ಕುಟ್ಟಪ್ಪನ್ ಮತ್ತು ರಾಜಮ್ಮ ದಂಪತಿಯ ಪುತ್ರಿಯಾದ ಇವರು ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಕುಲನಗರ ನಿವಾಸಿ, ನಿವೃತ್ತ ಹಿರಿಯ ಪಶುವೈದ್ಯ ಪರೀಕ್ಷಕ ಅಶೋಕ್ ಕೊಯಿಲರವರ ಪತ್ನಿ. ಇವರ ಹಿರಿಯ ಪುತ್ರ ಅಭಿಷೇಕ್ ಬೆಂಗಳೂರಿನಲ್ಲಿ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ. ಕಿರಿಯ ಪುತ್ರ ಅಶ್ವಿನ್ ಮಂಗಳೂರಿನಲ್ಲಿ ಇನ್‌ಫೋಸಿಸ್‌ನಲ್ಲಿ ಉದ್ಯೋಗಿಯಾಗಿದ್ದಾರೆ.