ನೆಟ್ಟಾರ್‌ ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ವಿರುದ್ದ ಎನ್‌ಐಎ ಚಾರ್ಜ್‌ಶೀಟ್

0

ಪುತ್ತೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಬಿಜೆಪಿಯ ಯುವ ನಾಯಕ ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಮಾಸ್ಟರ್‌ ಮೈಂಡ್‌ ಗಳ ವಿರುದ್ದ ರಾಷ್ಟ್ರೀಯ ತನಿಖಾ ದಳ ಎನ್‌.ಐ.ಎ ಬೆಂಗಳೂರಿನ ಎನ್‌.ಐ.ಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ.

ಇಂದು ಪ್ರಮುಖ ಆರೋಪಿಗಳಾದ ತುಫೈಲ್ ಎಂ.ಎಚ್ ಹಾಗೂ ಮೊಹಮ್ಮದ್ ಜಬೀರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಇದರಿಂದ ಒಟ್ಟು 21 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದಂತಾಗಿದೆ.

ಪಿಎಫ್‌ಐ ಸರ್ವೀಸ್ ಟೀಂನ ಸಕ್ರಿಯ ಸದಸ್ಯನಾಗಿರುವ ತುಫೈಲ್ ಕೊಡಗು ಮೂಲದವನಾಗಿದ್ದು, ಮಾಸ್ಟರ್ ಟ್ರೈನರ್ ಆಗಿ ಗುರುತಿಸಿಕೊಂಡಿದ್ದ. ದ.ಕ ಪುತ್ತೂರು ಹೊರ ವಲಯದ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್‌ನಲ್ಲಿ ಪಿಎಫ್‌ಐ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ ಎನ್ನಲಾಗಿದ್ದು, ನೆಟ್ಟಾರು ಕೊಲೆ ಆರೋಪಿಗಳಿಗೆ ಮೈಸೂರು, ಕೊಡಗು ಹಾಗೂ ತಮಿಳುನಾಡಿನ ಈರೋಡಿನಲ್ಲಿ ಆಶ್ರಯ ನೀಡಿದ್ದ. ಮತ್ತೋರ್ವ ಆರೋಪಿ ಮೊಹಮ್ಮದ್ ಜಬೀರ್ ದಕ್ಷಿಣ ಕನ್ನಡ ಜಿಲ್ಲೆಯ ಪಿಎಫ್‌ಐ ಜಿಲ್ಲಾಧ್ಯಕ್ಷನಾಗಿದ್ದು, ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಲು ನಡೆದಿದ್ದ ಗುಪ್ತ ಸಭೆಗಳಲ್ಲಿ ಭಾಗಿಯಾಗಿದ್ದ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. 2022 ಜುಲೈ 26ರಂದು ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಹತ್ಯೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here