ಸವಣೂರು: ಸವಣೂರು ಗ್ರಾಮದ ಪೆರಿಯಡ್ಕ, ಪಲ್ಲತಮೂಲೆ ನಿವಾಸಿಗಳು ಚುನಾವಣಾ ಬಹಿಷ್ಕಾರಕ್ಕೆ ನಿರ್ಧರಿಸಿದ್ದು, ಬ್ಯಾನರ್ ಅಳವಡಿಸಿ ಸಂಬಂಧ ಪಟ್ಟವರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
ಪೆರಿಯಡ್ಕ ,ಪಲ್ಲತಮೂಲೆಯ ನಿವಾಸಿಗಳ ಬಹು ಕಾಲದ ಬೇಡಿಕೆಯಾಗಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಸರಕಾರದಿಂದ ಅನುಮೋದನೆ ಗೊಂಡಿರುವ ಜಲಜೀವನ್ ಮಿಷನ್ ಯೋಜನೆ ಕಾಮಗಾರಿಯನ್ನು ಪಲ್ಲತ್ತಮೂಲೆಯ ಸರಕಾರಿ ಜಾಗದಲ್ಲಿ ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಸ್ಥಳೀಯ ವ್ಯಕ್ತಿಯೊಬ್ಬರ ಆಕ್ಷೇಪದ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಸದ್ರಿ ಸಾರ್ವಜನಿಕರ ಸಮಸ್ಯೆಯನ್ನು ಅಧಿಕಾರಿಗಳು ಬಗೆಹರಿಸಲು ಮೀನ ಮೇಷ ಎಣಿಸುತ್ತಿರುವುದರಿಂದ ಆಕ್ರೋಶಗೊಂಡ ಸ್ಥಳೀಯ ಕುಡಿಯುವ ನೀರಿನ ಬಳಕೆದಾರರು ಮುಂಬರುವ ವಿಧಾನಸಭಾ ಚುನಾವಣೆನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.