ಉಪ್ಪಿನಂಗಡಿ ವಲಯದಲ್ಲಿ ಜೆಡಿಎಸ್ ಅಭ್ಯರ್ಥಿ ಶ್ರೀಮತಿ ದಿವ್ಯ ಪ್ರಭಾ ಗೌಡರಿಂದ ಸಾರ್ವಜನಿಕ ಸಭೆ ಹಾಗೂ ಭರ್ಜರಿ ಮತ ಪ್ರಚಾರ

0

? ಪುತ್ತೂರಿನಲ್ಲಿ ಬಿಜೆಪಿ ಹಾಗು ಕಾಂಗ್ರೆಸ್ ಗೆ ಪರ್ಯಾಯವಾಗಿ ಜೆಡಿಎಸ್ ನತ್ತ ಜನರ ಒಲವು

? ಕಾಂಗ್ರೆಸ್ ಪಕ್ಷ ಜಾತ್ಯತೀತತೆಯ ಮುಖವಾಡ ಹಾಕಿಕೊಂಡು ಭಜರಂಗದಳ ಬ್ಯಾನ್ ಮಾಡಲು ಹೋಗಿ ಮುಖಭಂಗಕ್ಕೆ ಒಳಗಾಗಿದೆ: ದಿವ್ಯಪ್ರಭಾ

ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾರವರು ಇಂದು ಉಪ್ಪಿನಂಗಡಿ ಪೇಟೆ, ಶಾಂತಿನಗರ, ಸತ್ತಿಕಲ್ಲು, ಪೆರ್ನೆ, ಹಿರೇಬಂಡಾಡಿ, ಅಡೆಕಲ್, ಪೆರಿಯಡ್ಕದಲ್ಲಿ ಸಾರ್ವಜನಿಕ ಭಾಷಣ ನಡೆಸಿ ಭರ್ಜರಿ ಮತ ಪ್ರಚಾರ ನಡೆಸಿದರು.

ಪುತ್ತೂರು ತಾಲೂಕಿನಲ್ಲಿ ಉಪ್ಪಿನಂಗಡಿ ಪಟ್ಟಣವು ಅತೀ ವೇಗವಾಗಿ ಬೆಳೆಯುತ್ತಿರುವ ಪಟ್ಟಣ, ಅಂತೆಯೇ ವ್ಯಾಪಾರ ವ್ಯವಹಾರದಲ್ಲಿ ಕೇಂದ್ರ ಬಿಂದು ಆಗಿರುವ ಪಟ್ಟಣ. ಆದರೆ ಇಲ್ಲಿಗೆ ಯಾವುದೇ ಮೂಲಭೂತ ಸೌಕರ್ಯಗಳು ತಲುಪಿಲ್ಲ ಮತ್ತು ಮುಖ್ಯ ಬಸ್ ನಿಲ್ದಾಣದಲ್ಲಿ ಒಂದು ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ. ಬಸ್ಸು ನಿಲ್ದಾಣದಲ್ಲಿ ಒಂದು ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಇದನ್ನೆಲ್ಲಾ ಬಿಟ್ಟು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಗ್ಯಾರಂಟಿ ಉಚಿತ ಎಂದು ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡುತ್ತಿದೆ, ಈ ಉಚಿತ ಗ್ಯಾರಂಟಿಗಳನ್ನು ನೀಡುವ ಬದಲು ಗಗನಕ್ಕೇರಿರುವ ಅಗತ್ಯ ವಸ್ತುಗಳ ಬೆಲೆಗಳನ್ನು ಇಳಿಸಲು ಪ್ರಯತ್ನ ಮಾಡಿ ಎಂದರು. ಕುಮಾರಸ್ವಾಮಿಯವರು ನೀಡಿರುವ ಪಂಚರತ್ನ ಯೋಜನೆಯು ಯಾವುದೇ ಧರ್ಮಕ್ಕೆ, ಜಾತಿಗೆ, ವರ್ಗಕ್ಕೆ ಸೀಮಿತವಾಗಿಲ್ಲ, ಎಲ್ಲಾ ವರ್ಗದ ಜನರಿಗೆ ಬೇಕಾಗಿರುವ ಯೋಜನೆಗಳು ಈ ಪಂಚರತ್ನ ಯೋಜನೆಯಲ್ಲಿ ಒಳಗೊಂಡಿದೆ. ಹಾಗಾಗಿ ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಪರ್ಯಾಯವಾಗಿ ಬಂದಿರುವ ಜೆಡಿಎಸ್ ಪಕ್ಷಕ್ಕೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಗೆಲ್ಲಿಸಿಕೊಟ್ಟಲ್ಲಿ ಪುತ್ತೂರಿನ ಅಭಿವೃದ್ಧಿಯ ಚಿತ್ರಣವೇ ಬದಲಾಗುವಂತೆ ಮಾಡುತ್ತೇನೆ ಎಂಬ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರು ಅಶ್ರಫ್ ಕಲ್ಲೇಗ , ರಾಜ್ಯ ಜೆಡಿಎಸ್ ವಕ್ತಾರೆ ಶ್ರೀಮತಿ ಜೋಹರ ನಿಸಾರ್ ಅಹ್ಮದ್, ಉಪ್ಪಿನಂಗಡಿ ಜೆಡಿಎಸ್ ಬ್ಲಾಕ್ ಅಧ್ಯಕ್ಷರಾದ ಜಯರಾಜ್ ಅಮೀನ್, ಹಮೀದ್ ವಿಟ್ಲ, ರಫೀಕ್ ಮನಿಯಾರ್, ಜಲೀಲ್ ಕೊಯಿಲ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here