ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿರುವ ಸ್ವಿಮ್ಮಿಂಗ್ ಫೂಲ್ ನಲ್ಲಿ ಈಜು ತರಬೇತಿಗೆ ಚಾಲನೆ ನೀಡಲಾಯಿತು. ಅಥಿತಿಯಾಗಿ ಆಗಮಿಸಿದ್ದ ಎಂ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ರಶೀದ್ ವಿಟ್ಲ ಅವರು ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ ವಿಟ್ಲದ ಜನರು ಇತಿಹಾಸ ಪ್ರಸಿದ್ಧ ಕೋಟಿಕೆರೆಗೆ ಈಜು ಕಲಿಯಲು ತೆರಳುತ್ತಿದ್ದು, ಇದರಿಂದ ಹಲವಾರು ಮಂದಿ ಅಂತಾರಾಷ್ಟ್ರೀಯ ಮಟ್ಟದ ಈಜುಗಾರರಾಗಿ ಹೊರಹೊಮ್ಮಿದ್ದರು. ಇದೀಗ ಜನಪ್ರಿಯ ಸ್ಕೂಲ್ ನಲ್ಲಿ ಸುಸಜ್ಜಿತ ಸ್ವಿಮ್ಮಿಂಗ್ ಫೂಲ್ ನಿರ್ಮಾಣಗೊಂಡು ಈಜು ತರಬೇತಿ ಕಲಿಯುತ್ತಿರುವುದು ಇದರಿಂದ ಜನತೆಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದರು.
ಈ ಸಂದರ್ಭ ಶಾಲಾ ಆಡಳಿತ ಮಂಡಳಿ ನಿರ್ದೇಶಕ ನೌಶೀನ್ ಬದ್ರಿಯಾ, ನಿವೃತ್ತ ಸೈನಿಕ ಹರಿಣ್ ಕುಮಾರ್, ಈಜು ತರಬೇತುದಾರ ಆನಂದ ಕುಮಾರ್ ಮೈಸೂರು, ಮಕ್ಕಳ ಪೋಷಕ ಖಾದರ್ ಕಬಕ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಆಡಳಿತಾಧಿಕಾರಿ ಸಫ್ವಾನ್ ಪಿಳಿಕಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಸುಸಜ್ಜಿತವಾಗಿ ಸ್ವಿಮ್ಮಿಂಗ್ ಫೂಲ್ ನಿರ್ಮಾಣಗೊಂಡಿದ್ದು, ಇಲ್ಲಿ ಸುಮಾರು 20 ದಿನಗಳಲ್ಲಿ ಪ್ರತಿ ಬ್ಯಾಚ್ ಗೆ ತರಬೇತಿ ನೀಡಲಾಗುತ್ತಿದೆ. ಮಕ್ಕಳು ಮತ್ತು ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬಹುದು ಎಂದು ಆಡಳಿತ ಸಮಿತಿ ತಿಳಿಸಿದೆ.