ಬೆಂಗಳೂರು: ನಾಳೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿಕೊಂಡಿದೆ.SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆದಿತ್ತು. ಮೇ 10 ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಇದ್ದು ಇದಕ್ಕೂ ಎರಡು ದಿನ ಮೊದಲೇ SSLC ಫಲಿತಾಂಶ ಘೋಷಣೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಯಾರಿ ನಡೆಸಿಕೊಂಡಿದೆ.
ಈ ಬಾರಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದು ಅಷ್ಟೂ ಜನರಲ್ಲಿ ಎಷ್ಟು ಜನರು ಉತ್ತಮ ಫಲಿತಾಂಶ ಪಡೆದಿದ್ದಾರೆ ಎನ್ನುವುದು ನಾಳೆ ತಿಳಿಯಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಟಿ ನಡೆಯಲಿದ್ದು ಬೆಳಗ್ಗೆ 11 ಗಂಟೆಗೆ ಫಲಿತಾಂಶ http: karreusults nic in ವೆಬ್ಸೈಟ್ನಲ್ಲಿ ಪ್ರಕಟಗೊಳ್ಳಲಿದೆ.