ಪುತ್ತೂರು: ಬೆಳ್ಳಿಪ್ಪಾಡಿ ಶ್ರೀಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ನವೀಕರಣ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಎ.29ರಿಂದ ಪ್ರಾರಂಭಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಅನ್ನಸಂತರ್ಪಣೆ ನಡೆದು ಮೇ.7ರಂದು ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಿತು. ಮೇ.7ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕವಾಟ ಉದ್ಘಾಟನೆ, ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಪ್ರಾಯಶ್ಚಿತ ಶಾಂತಿ ತತ್ವ ಹೋಮಗಳ ಕಲಶಾಭಿಷೇಕ, ಮಹಾಬಲಿ ಪೀಠ ಪ್ರತಿಷ್ಠೆ, ಶ್ರೀದೇವರಿಗೆ ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ಆಶ್ಲೇಷಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ವೈದಿಕ ಮಂತ್ರಾಕ್ಷತೆ, ಸಂಜೆ ಭಜನಾ ಸೇವೆ, ರಾತ್ರಿ ಮಹಾಪೂಜೆ, ಶ್ರೀದೇವರ ಬಲಿ ಹೊರಟು ಶ್ರೀಭೂತಬಲಿ ಉತ್ಸವ ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ವಿವಿಧ ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು. ಮೇ.8ರಂದು ಕ್ಷೇತ್ರದ ದೈವಗಳಿಗೆ ನೇಮೋತ್ಸವ ನಡೆಯಲಿದೆ.
Home ಇತ್ತೀಚಿನ ಸುದ್ದಿಗಳು ಬೆಳ್ಳಿಪ್ಪಾಡಿ ಶ್ರೀಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ