ಇಂದು ಸಂಜೆ 5ರಿಂದ ಮದ್ಯ ಮಾರಾಟ ಬಂದ್

0

ಪುತ್ತೂರು:ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಮೇ13ರಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ. ಈ ಸಂಬಂಧ ಜಿಲ್ಲಾಡಳಿತದಿಂದ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಮತದಾನದ ಪ್ರಯುಕ್ತ ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಏಣಿಕೆ ಪ್ರಯುಕ್ತ ಮೇ13ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವೆರೆಗ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತದಾನ ಮತ್ತು ಮತಎಣಿಕೆಯ ಸಂದರ್ಭದಲ್ಲಿ ಮದ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಿ, ಶುಷ್ಕ ದಿನ(ಡ್ರೈ ಡೇ)ಎಂದು ಘೋಷಿಸಿ ಆದೇಶಿಸಿದೆ. ಈ ದಿನಗಳಂದು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ತರಹದ ಮದದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.

LEAVE A REPLY

Please enter your comment!
Please enter your name here