ಪುತ್ತೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು, ಸವಣೂರಿನಲ್ಲಿ ವಾರ್ಷಿಕ ಕ್ರೀಡಾಕೂಟವು ಎ.27ರಂದು ಜರುಗಿತು. ಡಾ. ರಾಮಚಂದ್ರ ಕೆ ದೈಹಿಕ ಶಿಕ್ಷಣ ಶಿಕ್ಷಕರು ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಪೆರುವಾಜೆ, ಮುಖ್ಯ ಅತಿಥಿ ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಹಾಗೂ ಕ್ರೀಡೆಯ ಬಗ್ಗೆ ಮಾಹಿತಿಗಳನ್ನು ನೀಡಿದರು.
ಇವರನ್ನು ಕಾರ್ಯಕ್ರಮದಲ್ಲಿ ಕಾಲೇಜಿನ ಸಂಚಾಲಕರು ಗೌರವಿಸಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಬಡ್ಡಿ ಆಟದ ತೀರ್ಪುಗಾರ ಮಂಡಳಿಯ ಅಧ್ಯಕ್ಷ ಶಿವರಾಮ ಸಿ ಏನೆಕಲ್ಲು ಇವರು ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಹೆಚ್ಚುವುದರಿಂದ ಎಲ್ಲಾ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು, ಪ್ರತಿಯೊಬ್ಬ ವಿದ್ಯಾರ್ಥಿಯು ಕನಿಷ್ಟ ಒಂದು ಕ್ರೀಡೆಯಲ್ಲಿಯಾದರು ಪಾಲ್ಗೊಳ್ಳಬೇಕೆಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರುರವರು, ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಶುಭಾಶಯಗಳನ್ನು ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಇಡಿ. ಅಶ್ವಿನ್ ಎಲ್. ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ. ಕೆ ಹಾಗೂ ನಮ್ಮ ಅಂಗ ಸಂಸ್ಥೆಯಾದ ಪಿಯು ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ ರವರು ಉಪಸ್ಥಿತರಿದ್ದರು.
ಕ್ರೀಡೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ತೃತೀಯ ಬಿ.ಕಾಂ ವಿದ್ಯಾರ್ಥಿ ಹಾಗೂ ಕ್ರೀಡೆಯ ಕಾರ್ಯದರ್ಶಿಯಾದ ಹೈದರ್ ಪ್ರಮಾಣವಚನವನ್ನು ಬೋದಿಸಿದರು. ಕಾರ್ಯಕ್ರಮದಲ್ಲಿ ಪ್ರಥಮ ಬಿ.ಎ ವಿದ್ಯಾರ್ಥಿನಿ ಸ್ವಾತಿ. ಕೆ ಸ್ವಾಗತಿಸಿ, ದ್ವಿತೀಯ ಬಿ.ಕಾಂ ವಿದ್ಯಾರ್ಥಿ ರಾಜೇಶ್ ವಂದಿಸಿದರು. ಕಾರ್ಯಕ್ರಮವನ್ನು ದ್ವಿತೀಯ ಬಿ.ಎ ವಿದ್ಯಾರ್ಥಿಯಾದ ಪ್ರವೀಣ ನಿರೂಪಿಸಿದರು.