ಉಪ್ಪಿನಂಗಡಿ:ಮೇ 20- ದತ್ತಿನಿಧಿ ಕಾರ್ಯಕ್ರಮ

0

ಉಪ್ಪಿನಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಪುತ್ತೂರು ತಾಲೂಕು ಘಟಕ ಇದರ ಆಶ್ರಯದಲ್ಲಿ 18 ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ದತ್ತಿ ನಿಧಿ ಕಾರ್ಯಕ್ರಮವು ಮೇ 20ರಂದು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.


ದತ್ತಿ ನಿಧಿ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಗೀತ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ ಜಿಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ ಉದ್ಘಾಟನೆ ನೆರವೇರಿಸಲಿದ್ದಾರೆ. ದ.ಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ಬಿ. ಐತ್ತಪ್ಪ ನಾಯ್ಕ್‌ರವರ ಉಪಸ್ಥಿತಿಯಲ್ಲಿ ಹಿರಿಯ ಸಾಹಿತಿ, ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲರವರು ದತ್ತಿ ನಿಧಿ ಉಪನ್ಯಾಸವನ್ನು ನೀಡಲಿದ್ದಾರೆ.


ಕಾರ್ಯಕ್ರಮದ ಸಮಾರೋಪ ಸಮಾರಂಭವು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಮಾರೋಪ ಭಾಷಣವನ್ನು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಮಾಡಲಿದ್ದಾರೆ. ವಿವೇಕಾನಂದ ಸ್ವಾಯತ್ತ ಕಾಲೇಜಿನ ಪರೀಕ್ಷಾಂಗ ಕುಲಪತಿ ಡಾ. ಎಚ್.ಜಿ. ಶ್ರೀಧರ್ ಗೌರವ ಉಪಸ್ಥಿತರಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here