ಪುತ್ತೂರು: ಕ್ರೈಮ್ ಮೀಟಿಂಗ್ ಗೆ ಸಂಬಂಧಿಸಿದಂತೆ ಪುತ್ತೂರಿಗೆ ಆಗಮಿಸಿದ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಅರುಣ್ ಕುಮಾರ್ ಪುತ್ತಿಲ ಭೇಟಿಯಾಗಿ ಮಾತುಕತೆ ನಡೆಸಿದರು. ಇಂದು ಪುತ್ತೂರು ನಗರ ಠಾಣೆಯಲ್ಲಿ ಎಸ್ಪಿ ಅವರನ್ನು ಭೇಟಿಯಾದ ಅರುಣ್ ಪುತ್ತಿಲ ಬ್ಯಾನರ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸರಿಂದ ಹಲ್ಲೆಗೊಳಗಾದ ಕಾರ್ಯಕರ್ತರ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.
ಪೋಲಿಸ್ ದೌರ್ಜನ್ಯಕ್ಕೊಳಗಾದ ಯುವಕನ ವೈದ್ಯಕೀಯ ವರದಿ ಬಂದಿದ್ದು ಕಿವಿ ತಮಟೆಗೆ ಹಾನಿಯಾಗಿದೆ ಎನ್ನಲಾಗಿದೆ. ಕಿವಿಯ ಸ್ಕ್ಯಾನಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಇದೇ ಕಾರಣಕ್ಕೆ ಪುತ್ತಿಲ ಪೊಲೀಸ್ ವರಿಷ್ಠಾಧಿಕಾರಿ ಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ .
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವಿನಾಶ್ ಕಿವಿ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಸ್ಕ್ಯಾನಿಂಗ್ ನಲ್ಲಿ ಕಿವಿ ತಮಟೆ ಹರಿದಿರುವ ಬಗ್ಗೆ ತಿಳಿದುಬಂದಿದೆ ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾದ ಅರುಣ್ ಕುಮಾರ್ ಪುತ್ತಿಲ್ಲ ಎರಡು ದಿನದಲ್ಲಿ ಡಿ ವೈ ಎಸ್ಪಿ ವೀರಯ್ಯ ಹಿರೇಮಠ ಅವರನ್ನು ಅಮಾನತುಗೊಳಿಸಿ ಸಂತ್ರಸ್ತರಿಗೆ 5 ಲಕ್ಷ ರೂಪಾಯಿಯಂತೆ ಪರಿಹಾರ ನೀಡಬೇಕೆಂದು ಒತಾಯಿಸಿದ್ದಾರೆ. ಇದಕ್ಕೆ ಸ್ಪಂದನೆ ಸಿಗದ ಹೋದಲ್ಲಿ ಹೋರಾಟ ನಡೆಸಲಾಗುವುದೆಂದು ತಿಳಿಸಿರುವುದಾಗಿ ತಿಳಿದುಬಂದಿದೆ. ಒಟ್ಟಿನಲ್ಲಿ ಬ್ಯಾನರ್ ಪ್ರಕರಣ ಹೊಸ ರೂಪ ಪಡೆಯುವ ಎಲ್ಲಾ ಲಕ್ಷಣ ಗೋಚರಿಸುತ್ತಿದೆ.