ಒಳಮೊಗ್ರು ಗ್ರಾ.ಪಂ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಇದರ ಆಶ್ರಯದಲ್ಲಿ ಗ್ರಾಮದ 5 ರಿಂದ 13 ವರ್ಷದ ಒಳಗಿನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಒಳಮೊಗ್ರು ಗ್ರಾಪಂ ಸಭಾಭವನದಲ್ಲಿ ಮೇ.25 ರಿಂದ 27ರವರೆಗೆ ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ನಡೆಯಲಿದ್ದು ಮೇ.25 ರಂದು ಶಿಬಿರದ ಉದ್ಘಾಟನೆ ನಡೆಯಿತು.

ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರು ದೀಪ ಬೆಳಗಿಸಿ ಶಿಬಿರದ ಉದ್ಘಾಟನೆಯನ್ನು ಮಾಡಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕ ರಾಮಣ್ಣ ರೈ ಕೈಕಾರರವರು ಗೇಮ್ಸ್ ಮೈಂಡ್ ಗೇಮ್ಸ್ ಎಂಬ ವಿಷಯದಲ್ಲಿ ತರಬೇತಿ ನೀಡಿದರು.


ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಸುಂದರಿ, ಸದಸ್ಯರುಗಳಾದ ಮಹೇಶ್ ರೈ, ರೇಖಾ, ಶಾರದಾ, ವನಿತಾ, ಸಂಜೀವಿನಿ ಒಕ್ಕೂಟದ ಎಂಬಿಕೆ ಚಂದ್ರಿಕಾ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್ ಸ್ವಾಗತಿಸಿ, ವಂದಿಸಿದರು. ಗ್ರಂಥಪಾಲಕಿ ಸಿರಿನಾ ಶಿಬಿರದ ವ್ಯವಸ್ಥೆ ಮಾಡಿದ್ದರು. ಗ್ರಾಪಂ ಸಿಬ್ಬಂದಿಗಳಾದ ಜಾನಕಿ, ಗುಲಾಬಿ, ಕೇಶವ, ವಿಕಲಚೇತನರ ಪುನರ್‌ವಸತಿ ಕಾರ್ಯಕರ್ತ ಮೋಹನ್ ಸಹಕರಿಸಿದ್ದರು. ಮೇ.27 ರಂದು ರಂಜಿತ್ ಕುಂಬ್ರರವರಿಂದ ಕ್ರಾಪ್ಟ್ ತರಬೇತಿ, 27 ರಂದು ಸುಬ್ರಹ್ಮಣ್ಯರವರಿಂದ ಡ್ರಾಯಿಂಗ್ ತರಬೇತಿ ನಡೆಯಲಿದೆ.

LEAVE A REPLY

Please enter your comment!
Please enter your name here