ಪುತ್ತೂರು: ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ, ಬಳಿಕ ವೈಯಕ್ತಿಕ ನೆಲೆಯಲ್ಲಿ ಪ್ರವೀಣ್ ನೆಟ್ಟಾರು ಪತ್ನಿಗೆ ನಾನು ಶಾಶ್ವತ ಕೆಲಸ ಕೊಡಿಸುತ್ತೇನೆ ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ನೆಟ್ಟಾರು ಪತ್ನಿ ನೂತನಾ ಅವರಿಗೆ ಕೇಂದ್ರ ಅಥವಾ ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಕೆಲಸ ನೀಡಬಹುದಿತ್ತು. ಆದರೆ ತಮ್ಮದೇ ಪಕ್ಷದ ಕಾರ್ಯಕರ್ತನ ಪತ್ನಿಗೆ ಬಿಜೆಪಿಯು ಗುತ್ತಿಗೆ ಆಧಾರಿತ ತಾತ್ಕಾಲಿಕ ಕೆಲಸವನ್ನು ನೀಡಿದೆ. ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದಿರುವ ಪ್ರತಿಭಾ ಕುಳಾಯಿ ಬಿಲ್ಲವ ಸಮಾಜ ಪ್ರವೀಣ್ ನೆಟ್ಟಾರು ಕುಟುಂಬವನ್ನು ಕೈ ಬಿಡುವುದಿಲ್ಲ. ಆದರೆ ಒಂದು ಕಂಡೀಷನ್, ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಆ ಬಳಿಕ ನಾನು ವೈಯಕ್ತಿಕ ನೆಲೆಯಲ್ಲಿ ನೂತನಾಗೆ ಕೆಲಸ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.