ಪುತ್ತೂರು: ಬ್ಯಾಂಕ್ ಆಫ್ ಬರೋಡಾ ಪ್ರಾಯೋಜಕತ್ವದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ – ಕೆದಂಬಾಡಿ ಗ್ರಾಮ ಇದರ ಆಶ್ರಯದಲ್ಲಿ ರಬ್ಬರ್ ತೋಟಕ್ಕೆ ಕೋಪರ್ ಒಕ್ಸಿಕ್ಲೋರೈಡ್ ಸಿಂಪರಣೆ ಡ್ರೋನ್ ಪ್ರಾತ್ಯಕ್ಷಿಕೆ ಮಾಹಿತಿ ಕಾರ್ಯಾಗಾರ ಮೇ.29 ರಂದು ಸಿರಿಕಡಮಜಲು ಕೃಷಿ ಕ್ಷೇತ್ರದಲ್ಲಿ ನಡೆಯಿತು.
ಬೆಳಿಗ್ಗೆ ಬ್ಯಾಂಕ್ ಆಫ್ ಬರೋಡ ಮಂಗಳೂರು ಜಿಲ್ಲಾ ಕ್ಷೇತ್ರ ಪ್ರಾದೇಶಿಕ ವ್ಯವಸ್ಥಾಪಕ ದೇವಿಪ್ರಸಾದ್ ಶೆಟ್ಟಿ ಕಾರ್ಯಗಾರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಯ್ಯೂರು ಕೆದಂಬಾಡಿ ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ ಎ.ಕೆ. ಜಯರಾಮ ರೈ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯನಿರ್ವಹಣಾಧಿಕಾರಿ ಸಚಿನ್ ಹೆಗ್ಡೆ, ಸಂಪನ್ಮೂಲ ವ್ಯಕ್ತಿಗಳಾಗಿ ಪುತ್ತೂರು ಪ್ರಾದೇಶಿಕ ಕಚೇರಿಯ ರಬ್ಬರ್ ಉತ್ಪಾದನಾ ಆಯುಕ್ತರಾದ ಡಿ. ಸುರೇಶ್ ಕುಮಾರ್ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ರಬ್ಬರ್ ಮಂಡಳಿ ಪ್ರಾದೇಶಿಕ ಕಚೇರಿಯ ಸಹಾಯಕ ಅಭಿವೃದ್ಧಿ ಅಧಿಕಾರಿ ಶೋಭಾನ ಉಪಸ್ಥಿತರಿದ್ದರು.
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯ ಕಡಮಜಲು ಸುಭಾಸ್ ರೈ ಡ್ರೋನ್ ಪ್ರಾತ್ಯಕ್ಷಿಕೆಯನ್ನು ಉದ್ಘಾಟಿಸಿದರು. ಡ್ರೋನ್ ಪ್ರಾತ್ಯಕ್ಷಿಕೆಯನ್ನು ನಿರ್ವಹಣೆ ಮಾಡಿದ ಕರ್ನಾಟಕ ಆಗ್ರೋ ಕೆಮಿಕಲ್ಸ್ ನ ಡೀಲರ್ ಲೋಕೇಶ್ ಪೆರ್ಲಂಪಾಡಿ ಹಾಜರಿದ್ದರು. ಬೆಳಿಗ್ಗೆ ಉಪಾಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು. ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ಕೆದಂಬಾಡಿ ಗ್ರಾಮ ಸಮಿತಿಯ ಅಧ್ಯಕ್ಷ ವಿಜಯ ಕುಮಾರ್ ರೈ ಕೋರಂಗ ಸ್ವಾಗತಿಸಿ ನಿರೂಪಿಸಿದರು. ವಿವಿಧ ಗ್ರಾಮ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಹಲವು ಕೃಷಿಕರು ಪಾಲ್ಗೊಂಡರು.