ಪುತ್ತೂರು: ಆನಡ್ಕ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಮೇ.31ರಂದು ನಡೆಯಿತು.
ನೂತನ ವಿದ್ಯಾರ್ಥಿಗಳನ್ನು ಆರತಿ ಬೆಳಗಿ , ಗುಲಾಬಿ ಹೂವು ಕೊಟ್ಟು ವಾದ್ಯ ಘೋಷದೊಂದಿಗೆ ಸ್ವಾಗತಿಸಲಾಯಿತು.ಸಭಾ ಕಾರ್ಯಕ್ರಮದಲ್ಲಿ ಸರಕಾರದಿಂದ ನೀಡಲಾದ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನಾರಾಯಣ ಸುವರ್ಣ ಶುಭನುಡಿಗಳನ್ನಾಡಿದರು.ಸುಧಾಕರ್ ಕುಲಾಲ್ ಮತ್ತು ಎಂ ದಿನೇಶ್ ಶುಭ ,ಶಾಲಾ ಮುಖ್ಯ ಗುರು ಶುಭಲತಾ ಶುಭಹಾರೈಸಿದರು.
ನರಿಮೊಗರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧಾಕರ ಕುಲಾಲ್, ಎಸ್ ಡಿ ಎಂ ಸಿ ಅಧ್ಯಕ್ಷ ನಾರಾಯಣ ಸುವರ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ಎಂ ದಿನೇಶ್ ಎಸ್ ಡಿ ಎಂ ಸಿ ಸದಸ್ಯರು ಮತ್ತು ಪೋಷಕರ ಉಪಸ್ಥಿತರಿದ್ದರು. ಸಹಶಿಕ್ಷಕಿ ಫೆಲ್ಸಿಟಾ ಡಿಕುನ್ಹಾ ಸ್ವಾಗತಿಸಿ, ಮಾಲತಿ ವಂದಿಸಿ,ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.ಸೌಮ್ಯ ಮತ್ತು ಲೀಲಾವತಿ ಸಹಕರಿಸಿದರು.