ಪುತ್ತೂರು: ರಾಜ್ಯದಲ್ಲಿ ಮೇ.31 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನರಾರಂಭಗೊಂಡಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಳೆಯ ಬಸ್ಸನ್ನು ಮಾನ್ಯ ಮಾಡಿದ್ದು ಪಾಸ್ ಅವಧಿಯನ್ನು ಜೂನ್ 15ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಆದೇಶ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.