





ಪುತ್ತೂರು: ಇಂದು(ಮೇ.31) ಸುರಿದ ಭಾರಿ ಗಾಳಿ ಮಳೆಗೆ ಕುಂಬ್ರ ಶೇಕಮಲೆಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕೆಲ ಸಮಯ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಭಾರಿ ಗಾಳಿ ಮಳೆಯಿಂದ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರಿಳಿದ್ದು ವಿದ್ಯುತ್ ವ್ಯತ್ಯಯವಾಗಿದೆ.ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ತಿಳಿದು ಬಂದಿದೆ.








