





ಪುತ್ತೂರು: ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆ ಈಶ್ವರಮಂಗಲ ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಮೇ.31ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಗೋಪಾಲಕೃಷ್ಣ ಕುಂಜತ್ತಾಯ ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಕೆ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದಿ ಶಿಕ್ಷಕಿ ಸುಪ್ರಭಾ ಬಿ ಸಾಗತಿಸಿ, ಕನ್ನಡ ಶಿಕ್ಷಕಿ ,ದಮಯಂತಿ ವಂದಿಸಿ ಗಣಿತ ಶಿಕ್ಷಕಿ ವಿನುತ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪೋಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.














