ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ್ ಅಧಿಕಾರ ಸ್ವೀಕಾರ

0

ಪುತ್ತೂರು: ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿದ್ದು ಇದೀಗ ಆಂತರಿಕ ಭದ್ರತಾ ದಳದ ಡಿಜಿಪಿಯಾಗಿ ವರ್ಗಾವಣೆಗೊಂಡಿರುವ ಪ್ರತಾಪ್ ರೆಡ್ಡಿ ಅವರು ಬಿ.ದಯಾನಂದ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಿ.ದಯಾನಂದ್ ಅವರು ಆರಂಭದಲ್ಲಿ ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದು ಉತ್ತಮ ಅಧಿಕಾರಿ ಎಂದು ಹೆಸರು ಪಡೆದಿದ್ದರು. ಪದೋನ್ನತಿ ಹೊಂದಿ ಪುತ್ತೂರುನಿಂದ ವರ್ಗಾವಣೆಗೊಂಡಿದ್ದ ಅವರು ಬಳಿಕ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here