ಪುತ್ತೂರು: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಆಶ್ರಯದಲ್ಲಿ ಅಂತರ್ ಸರ್ಕಾರಿ ಪದವಿ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳ ಉತ್ಸವ ನಡೆಯಿತು. ಕಾರ್ಯಕ್ರಮವನ್ನು ನೃತ್ಯ ಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತ ಹಾಗೂ ಪತ್ರಕರ್ತೆ ಶಾರದಾ ದಾಮೋದರ್ ಉದ್ಘಾಟಿಸಿದರು.
ತಮ್ಮ ಉದ್ಘಾಟನಾ ಭಾಷಣದಲ್ಲಿ , ಪ್ರತಿಭೆಗಳ ಅನಾವರಣಕ್ಕೆ ಇಂತಹ ಕಾರ್ಯಕ್ರಮಗಳು ಅತೀ ಅಗತ್ಯ ಎಂದು ಹೇಳಿದರು. ನಿರಂತರ ಪರಿಶ್ರಮ, ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಯುವಜನರು ತಮ್ಮ ಪ್ರತಿಭೆಗೆ ಮನ್ನಣೆ ಪಡೆಯಲು ಸಾಧ್ಯ, ಈ ನಿಟ್ಟಿನಲ್ಲಿ ಸರ್ಕಾರಿ ಕಾಲೇಜು ಅತ್ಯುತ್ತಮ ವೇದಿಕೆಯನ್ನು ಒದಗಿಸುತ್ತಿರುವ ವಿಚಾರ ಶ್ಲಾಘನೀಯ ಎಂದು ಅಭಿಪ್ರಾಯ ಪಟ್ಟರು.
ದಕ್ಷಿಣ ಕನ್ನಡ ಜಿಲ್ಲೆಯ 13 ಕಾಲೇಜುಗಳು ಭಾಗವಹಿಸಿದ್ದ ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ ಸ್ಟ್ರೀಟ್ ಮಂಗಳೂರು ಪ್ರಥಮ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ದ್ವಿತೀಯ ಪ್ರಶಸ್ತಿ ಪಡೆಯಿತು. ಕಾಲೇಜಿನ ನಿಕಟ ಪೂರ್ವ ಪ್ರಾಂಶುಪಾಲ ಪ್ರೊ ಶ್ರೀಧರ ಗೌಡ ಬಹುಮಾನ ವಿತರಣೆ ಮಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಗೋಪಾಲಕೃಷ್ಣ ಕೆ ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಂಘದ ಸಂಚಾಲಕ ಪ್ರೊ ಶಾಂತಾರಾಮ್ ಸ್ವಾಗತಿಸಿದರು. ಪ್ರಾಧ್ಯಾಪಕ ಪ್ರೊ ಐವನ್ ಲೋಬೋ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಧ್ಯಾಪಕ ನಂದಕಿಶೋರ್ ಎಸ್ ಸ್ಪರ್ಧೆಗಳನ್ನು ಸಂಯೋಜಿಸಿದರು. ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಕು.ದಿಲ್ಶಾನ ಹಾಗೂ ಅರ್ಚನಾ ವಂದಿಸಿದರು. ದೀಕ್ಷಿತಾ ರೈ ನಿರೂಪಿಸಿದರು. ಎಕ್ಸ್ಟ್ರೀಮ್ ಡಾನ್ಸ್ ತಂಡದ ವಿನೋದ್ ರಾಜ್, ಕಾಲೇಜಿನ ಹಿರಿಯ ವಿದ್ಯಾರ್ಥಿನಿ ದಿವ್ಯಶ್ರೀ, ಯುವ ಗಾಯಕ ಮಾಧವ ವಿ ಎಸ್ ತೀರ್ಪುಗಾರರಾಗಿ ಸಹಕರಿಸಿದರು .