ಹಿಂದು ಜಾಗರಣ ವೇದಿಕೆಯ‌ ಮಾಜಿ ಅಧ್ಯಕ್ಷ ರಮೇಶ್ ರೈ ಬಿಜೆಪಿಗೆ ಗುಡ್ ಬೈ- ಕಾಂಗ್ರೆಸ್ ಸೇರ್ಪಡೆ

0

ಪುತ್ತೂರು: ಹಿಂದು ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ರಮೇಶ್ ರೈ ಡಿಂಬ್ರಿ ಜೂನ್ 3ರಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಪುರಭವನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ರೈ ‘ಕೈ’ ಹಿಡಿಯಲಿದ್ದಾರೆ.


ಹಿಂದು ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಸಂಚಾಲಕರಾಗಿ, ಅಧ್ಯಕ್ಷರಾಗಿ 12 ವರ್ಷ ಕಾರ್ಯ ನಿರ್ವಹಿಸಿದ್ದ ರಮೇಶ್ ರೈ ಅವರು ಬಳಿಕ ಆರ್ಯಾಪು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದರು. ಮೂಲತಃ ಕೋಡಿಂಬಾಡಿ ಗ್ರಾಮದ ಪಿಜಿನಡ್ಕಗುತ್ತು ನಿವಾಸಿಯಾಗಿರುವ ರಮೇಶ್ ರೈ ಪ್ರಸ್ತುತ ಆರ್ಯಾಪು ಗ್ರಾಮದ ಡಿಂಬ್ರಿ ನಿವಾಸಿಯಾಗಿದ್ದಾರೆ. ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಪುತ್ತೂರು ಯುವ ಬಂಟರ ಸಂಘದ ಉಪಾಧ್ಯಕ್ಷರಾಗಿ, ಕೋಶಾಧಿಕಾರಿಯಾಗಿ, ಅಧ್ಯಕ್ಷರಾಗಿ, ಬಂಟರ ಸಂಘದ ನಿರ್ದೇಶಕರಾಗಿ, ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವ ರಮೇಶ್ ರೈ ಪ್ರಸ್ತುತ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.‌
ಪುತ್ತೂರಿನಲ್ಲಿ ತುಳುನಾಡ ಸೇನೆಯನ್ನು ಸ್ಥಾಪಿಸಿದ್ದ ರಮೇಶ್ ರೈ ಡಿಂಬ್ರಿ ಅವರು ಬಿಜೆಪಿ ಮತ್ತು ಹಿಂದು ಸಂಘಟನೆಯಲ್ಲಿ ಸಕ್ರಿಯರಾಗಿದ್ದರು.‌ ಬಿಜೆಪಿಯಲ್ಲಿನ ಇತ್ತೀಚೆಗಿನ ಬೆಳವಣಿಗೆಯಿಂದ ಮನನೊಂದು ಕಾಂಗ್ರೆಸ್ ಸೇರುತ್ತಿರುವುದಾಗಿ ರಮೇಶ್ ರೈ ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here