ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿ ಸೋಲಿಗೆ ಪ್ರಮುಖ ಕಾರಣರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ರಾಷ್ಟ್ರಮಟ್ಟದ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಈ ನಡುವೆ ಅರುಣ್ ಕುಮಾರ್ ಪುತ್ತಿಲ ಅವರು ವಿವಿಧ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿ, ಅಲ್ಲಿನ ಶ್ರೀಗಳ ಆಶೀರ್ವಾದ ಪಡೆಯುತ್ತಿದ್ದಾರೆ.
ಜೂ.2ರಂದು ಮೈಸೂರಿನ ಪುಣ್ಯಕ್ಷೇತ್ರ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದು ಕೊಂಡರು. ಇದಕ್ಕೂ ಮೊದಲು ಸಿದ್ಧಗಂಗಾ ಮಠಕ್ಕೆ ತೆರಳಿದ್ದರು. ಜೂ.3ರಂದು ಅವರು ಮಂತ್ರಾಲಯ ಕ್ಷೇತ್ರಕ್ಕೆ ತೆರಳಿದ್ದಾರೆ.