ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ

0

ಪುತ್ತೂರು : ಜುಲೈ ಮೂರರಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭಗೊಳ್ಳಲಿದ್ದು ಜುಲೈ 7ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವರು. ರಾಜ್ಯಪಾಲರ ಭಾಷಣ ಕುರಿತು ಚರ್ಚೆ ಬಳಿಕ ಜುಲೈ 7ರ ಶುಕ್ರವಾರ ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಇನ್ನು ಬಜೆಟ್ ವಿಚಾರವಾಗಿ ಪೂರ್ವಭಾವಿ ಸಭೆಗಳು ನಡೆದಿಲ್ಲ. ಹಾಗಾಗಿ ಈಗಲೇ ಬಜೆಟ್ ಗಾತ್ರದ ಬಗ್ಗೆ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರ ಚುನಾವಣಾ ಪೂರ್ವದಲ್ಲಿ 2.43 ಲಕ್ಷಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ ಎಂದವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here