ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಪವಿತ್ರ ಜಿ. ರಾಜ್ಯಮಟ್ಟದ ಟ್ರಿಪಲ್‌ಜಂಪ್‌ನಲ್ಲಿ ಚಿನ್ನದ ಪದಕ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ ಜಿ. ರಾಜ್ಯ ಮಟ್ಟದ ಹಿರಿಯರ ಅಥ್ಲೆಟಿಕ್ ಸ್ಪರ್ಧೆ-2023ರ ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ 12.76 ಮೀಟರ್ ದೂರ ಜಿಗಿದು ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ಇವರು ರಾಷ್ಟ್ರೀಯ ಹಿರಿಯರ ಅತ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here