ಮಂಗಳೂರು:ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ.ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ವತಿಯಿಂದ ನೀಡುವ ‘ಮದರ್ ತೆರೇಸಾ ಮೆಮೊರಿಯಲ್ ನ್ಯಾಷನಲ್ ಅವಾರ್ಡ್‘ಗೆ ಆಯ್ಕೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜೂ.6ರಂದು ನಡೆದ ಅಂತರ್ರಾಷ್ಟ್ರೀಯ ದಾದಿಯರ ದಿನಾಚರಣೆಯಲ್ಲಿ ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟೀಸ್ ಅಬ್ದುಲ್ ನಜೀರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸಹಕಾರ ಕ್ಷೇತ್ರ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ನಾಲ್ಕೂವರೆ ದಶಕಗಳ ಕಾಲ ಮಾಡಿದ ಸೇವೆಯನ್ನು ಗುರುತಿಸಿ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.
ಸಮಾರಂಭದಲ್ಲಿ ಸಿಸ್ಟರ್ ಆಗ್ನೇಸ್, ಬೆಂಗಳೂರು ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷೆ ಡಿ.ಎ.ಕಲ್ಪಜ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ|ಡಾ.ಎಸ್.ಚಂದ್ರಶೇಖರ್ ಶೆಟ್ಟಿ, ಭಾರತ ಸರ್ಕಾರದ ನಿಮಾನ್ಸ್ ಸಂಸ್ಥೆಯ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ, ತುಮಕೂರು ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಸಂಸ್ಥೆಯ ಉಪಕುಲಪತಿ ಕೆ.ಬಿ.ಲಿಂಗೇಗೌಡ, ಕರ್ನಾಟಕ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಪ್ರಸನ್ನ ಕುಮಾರ್, ಆಕ್ಸ್-ಫರ್ಡ್ ಮೆಡಿಕಲ್ ಕಾಲೇಜು ಅಧ್ಯಕ್ಷ ಎಸ್.ಎನ್.ವಿ.ಎಲ್.ನರಸಿಂಹ ರಾಜು, ಇಂಡಿಯನ್ ಆರ್ಮಿಯ ಮಾಜಿ ಅಧಿಕಾರಿ ಮೇಜರ್ ಜನರಲ್ ವಿಪಿಎಸ್ ಭಕುನಿ, ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕದ ಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಇದ್ದರು.