ಜೂ.10: ಅಕ್ಷಯ ಕಾಲೇಜಿನ ವಾರ್ಷಿಕೋತ್ಸವ ‘ಅಕ್ಷಯ ವೈಭವ’

0

ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ವಾರ್ಷಿಕೋತ್ಸವ ‘ಅಕ್ಷಯ ವೈಭವ’ ಜೂ.10 ರಂದು ಸಂಜೆ ಜರಗಲಿದೆ.
ಶಾಸಕ ಅಶೋಕ್ ಕುಮಾರ್ ರೈಯವರು ವಾರ್ಷಿಕೋತ್ಸವವನ್ನು ಉದ್ಘಾಟಿಸಲಿದ್ದಾರೆ. ಅಕ್ಷಯ ಕಾಲೇಜಿನ ಚೇರ್ ಮ್ಯಾನ್ ಜಯಂತ್ ನಡುಬೈಲುರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವೈಸ್ ಚಾನ್ಸಲರ್ ಡಾ. ಜಯರಾಜ್ ಅಮೀನ್, ಮಂಗಳೂರು ಕೆಎಂಎಫ್ ಉಪಾಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ ಜಯರಾಮ ರೈ ಬಳಜ್ಜ, ಕಾಲೇಜಿನ ಹಿರಿಯ ವಿದ್ಯಾರ್ಥಿ, ಪ್ರಸ್ತುತ ಬೆಂಗಳೂರಿನ ಅರವಿಂದ ಪ್ರೈವೇಟ್ ಲಿಮಿಟೆಡ್ ನಲ್ಲಿ ಆಪರೇಶನ್ಸ್ ಮ್ಯಾನೇಜರ್ ಆಗಿರುವ ಶಮಂತ್ ಕೊಲ್ಯರವರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ ಎಂದು ಕಾಲೇಜು ಪ್ರಾಂಶುಪಾಲ ಸಂಪತ್ ಕೆ.ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಗನ್ ದೀಪ್ ಎ.ಬಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here