ರಾಮಕುಂಜ ಆ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್ ಹಾಗೂ ವಿಜ್ಞಾನ ಸಂಘದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಸಸಿಗಳನ್ನು ನೆಡುವುದರ ಮೂಲಕ ಪರಿಸರದ ಬಗ್ಗೆ ಕಾಳಜಿ, ಪರಿಸರ ಉಳಿಸಿ ಬೆಳೆಸುವ ಜವಾಬ್ದಾರಿಯ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಆಡಳಿತಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ, ತಾಂತ್ರಿಕ ಸಲಹೆಗಾರ ಜಯೇಂದ್ರ ಬಿ ಉಪಸ್ಥಿತರಿದ್ಧರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತ ಸ್ವಾಗತಿಸಿದರು. 10ನೇ ತರಗತಿ ವಿದ್ಯಾರ್ಥಿನಿ ಹಿತಾಶ್ರೀ ಅವರು ಪರಿಸರದ ಮಹತ್ವದ ಬಗ್ಗೆ ಹೇಳಿದರು. 10ನೇ ತರಗತಿ ವಿದ್ಯಾರ್ಥಿನಿಯರು ಪರಿಸರ ಗೀತೆ ಹಾಡಿದರು. ಸಹ ಶಿಕ್ಷಕಿ ದೀಕ್ಷಾ ವಂದಿಸಿದರು. 10ನೇ ತರಗತಿ ವಿದ್ಯಾರ್ಥಿನಿ ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here